ಫೇಸ್‌ಬುಕ್‌ನಲ್ಲಿ ಟ್ಯಾಗ್ ಮಾಡಿದರೆ ಏನು ಮಾಡುತ್ತೀರಿ?

ಮಾಹಿತಿ@ತಂತ್ರಜ್ಞಾನ: ಅವಿನಾಶ್ ಬಿ. (ಜನವರಿ 20, 2014)ಸಾಮಾಜಿಕ ಜಾಲ ತಾಣಗಳಲ್ಲಿ ಯಾರ್ಯಾರೋ ಫ್ರೆಂಡ್ ಆಗ್ತಾರೆ, ದೂರದಲ್ಲೆಲ್ಲೋ ಇದ್ದವರು ಆತ್ಮೀಯರಾಗಿಬಿಡುತ್ತಾರೆ, ನಿಮ್ಮ ಪೋಸ್ಟ್‌ಗಳಿಗೆ ಕಾಮೆಂಟ್ ಮಾಡುತ್ತಾರೆ, ಒಂದೊಳ್ಳೆಯ ಚರ್ಚೆ ನಡೆಯುತ್ತದೆ. ಸಮಾಜದ ಆಗುಹೋಗುಗಳ ಬಗ್ಗೆ, ಒಳಿತು ಕೆಡುಕುಗಳ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತದೆ ಮತ್ತು ಅಲ್ಲೊಂದು ಅವಾಸ್ತವಿಕ ಸಾಮಾಜಿಕ ಜಗತ್ತು ಸೃಷ್ಟಿಯಾಗಿರುತ್ತದೆ. ಇಷ್ಟೆಲ್ಲಾ ಆಗುವ ಹೊತ್ತಿಗೆ, ಯಾವಾಗ ಫೋಟೋಗಳನ್ನೂ ಸಾಮಾಜಿಕ ತಾಣದಲ್ಲಿ ಹಂಚಿಕೊಳ್ಳುವ ಆಯ್ಕೆ ಬಂದಿತೋ, ಆಗಿನಿಂದ ಫೇಸ್‌ಬುಕ್ ಬಳಕೆದಾರರದು ಒಂದೇ ವೇದನೆ, ರೋದನೆ… ಫೋಟೋಗಳಿಗೆ ಟ್ಯಾಗ್ ಮಾಡಿದರೆ ಜೋಕೆ…

Rate this: